ಬೆಂಗಳೂರು: ಬಾಲಕಿಯೊಬ್ಬಳನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಆರೋಪದ ಮೇಲೆ ಇನ್ಸಾಗ್ರಾಂ ಸ್ಟಾರ್ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

‘ಸೋನು ಗೌಡ ಅವರು ಬಾಲಕಿಯೊಬ್ಬರನ್ನು ದತ್ತು ಪಡೆದ ಸಂಬಂಧ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಸೋನು ಗೌಡ ಅವರನ್ನು ಗುರುವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಸೋನು ಗೌಡರವರು ರಾಯಚೂರಿನ ದಂಪತಿಯ ಮಗಳನ್ನು ಅಕ್ರಮವಾಗಿ ದತ್ತು ಪಡೆದಿದ್ದ ಸೋನು ಗೌಡ, ತನ್ನ ಮನೆಯಲ್ಲಿ ಇರಿಸಿಕೊಂಡಿದ್ದರು ಎನ್ನಲಾಗಿದ್ದು ಹಾಗೂ ಬಾಲಕಿ ಜೊತೆ ರೀಲ್ಸ್ ವಿಡಿಯೊ ಸಹ ಅವರು ಮಾಡುತ್ತಿದ್ದರು.

ವಿಡಿಯೊ ಗಮನಿಸಿದ್ದ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿದ್ದರು. ಮಕ್ಕಳ ದತ್ತು ಸಂಬಂಧ ಕಾಯ್ದೆ ಜಾರಿಯಲ್ಲಿದ್ದು, ಅದರ ನಿಯಮಗಳನ್ನು ಸೋನುಗೌಡ ಅವರು ಪಾಲಿಸಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ, ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.