ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಪುತ್ತೂರು ರವರನ್ನು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ. ರಾಜಾರಾಮ್ ಕೆ.ಬಿ ರವರ ಶಿಫಾರಸಿನ ಮೇರೆಗೆ ಆಯ್ಕೆ ಮಾಡಿ ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಎಡ್ವರ್ಡ್, NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಘಟನೆ ಮಾಡುವಲ್ಲಿ ಇವರ ಛಲ ಗುರುತಿಸಿ NSUI ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಮತ್ತು ರಾಜ್ಯ ಕಾರ್ಯದರ್ಶಿ ಭಾತೀಷ್ ಅಳಕೆಮಜಲು ರವರ ಸಲಹೆಯಂತೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಪುತ್ತೂರಿನ ವಿವಿದೆಡೆ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾದಾಗ ಮುಂದೆ ಬಂದು ಈ ಬಗ್ಗೆ KSRTC ಪ್ರಮುಖರ ಜೊತೆ ಮಾತನಾಡಿ, ಹೆಚ್ಚುವರಿ ಬಸ್ ಗಳಿಗಾಗಿ ಕೊನೆವರೆಗೂ ಹೋರಾಟ ನಡೆಸಿದ ಕೀರ್ತಿ ಇವರಿಗಿದೆ. ಹಲವು ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಮಸ್ಯೆಗಳು ಎದುರಾದಾಗ ಅವರ ಪರ ನಿಂತು ನ್ಯಾಯ ಒದಗಿಸುವಲ್ಲಿ ಯಶಸ್ವಿಯಾದ ಎಡ್ವರ್ಡ್ ರವರು ಪುತ್ತೂರಿನ ಅಧ್ಯಕ್ಷರಾಗಿರುವುದು NSUI ಕಾರ್ಯಕರ್ತರಲ್ಲಿ ಸಂತಸ ಮೂಡಿದೆ.