dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಇನ್ಸಾಗ್ರಾಂ ಸ್ಟಾರ್ ಸೋನು ಶ್ರೀನಿವಾಸ್‌ಗೌಡಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ.

ರಾಯಚೂರಿನ ಕೂಲಿ ಕಾರ್ಮಿಕ ದಂಪತಿಯ ಹೆಣ್ಣು ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್‌ಗೌಡ ಅವರನ್ನು ಮಾ.25ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾಗ ವಿಚಾರಣೆ ಮಾಡಿದ ನ್ಯಾಯಾಧೀಶರು 5 ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದರು.

'; } else { echo "Sorry! You are Blocked from seeing the Ads"; } ?>

ಆದರೆ, ಐದು ದಿನಗಳಲ್ಲಿ ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಪೊಲೀಸರು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರ ಪರವಾಗಿ ವಾದ ಆಲಿಸಿದ ನ್ಯಾಯಾಲಯದಿಂದ ಸೋನು ಶ್ರೀನಿವಾಸ್‌ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಂತರ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿತ್ತು.

ನ್ಯಾಯಾಂಗ ಬಂಧನದಲ್ಲಿದ್ದ ಸೋನು ಶ್ರೀನಿವಾಸ್‌ಗೌಡ ಅವರು ಜಾಮೀನು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಬೆಂಗಳೂರು ಗ್ರಾಮಾಂತರ ಸಿಜೆಎಂ ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಸೋನು ಶ್ರೀನಿವಾಸ್‌ಗೌಡ ಅವರಿಗೆ ಜಾಮೀನು ಮಂಜೂರು ಮಾಡಿದೆ. ಅವರ ಪರವಾಗಿ ವಕೀಲ ಪ್ರಕಾಶ್ ವಾದ ಮಂಡಿಸಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!