';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸೆಪ್ಟಂಬರ್ 5ರಂದು ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವದಲ್ಲಿ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ ನೀಡಲು ಕೇಳಿದ್ದೇವೆ. ಹೀಗಾಗಿ ಅದನ್ನು ನೋಡಿಕೊಂಡು ತೀರ್ಮಾನವನ್ನು ತೆಗೆದುಕೊಳ್ಳಲಾಗುವುದೆಂದು ಹೇಳಿದರು.