';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: ವಿಟ್ಲ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ತಾಲೂಕಿನ ವಿಟ್ಲ ಭಾಗದ ಪುಣಚ ಗ್ರಾಮದಲ್ಲಿ ನಡೆದಿದೆ.
ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕುಸಿದು ಬಿದ್ದ ಬಗ್ಗೆ ವರದಿಯಾಗಿದೆ.
ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿ ಮೇಲ್ಭಾಗ ಸಂಪೂರ್ಣ ಕುಸಿದಿದೆ.
ಸೇತುವೆ ಸಾಮಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿ ಗಾಯಗೊಂಡವರನ್ನು ಕೂಡಲೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹಾಗೂ ಅದರಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾದ ಬಗ್ಗೆ ವರದಿಯಾಗಿದೆ.