dtvkannada

'; } else { echo "Sorry! You are Blocked from seeing the Ads"; } ?>

ತುಮಕೂರು: ಮುಂದೆ ಹೋಗುತ್ತಿದ್ದದ ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

'; } else { echo "Sorry! You are Blocked from seeing the Ads"; } ?>

ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ, ಗುರುವಾರ ಬೆಳ್ಳಬೆಳಗ್ಗೆಯೇ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿಯ ಉಮೇಶ್ ನಾಗಪ್ಪ ಮತ್ತು ಸಂತೋಷ್ ಸುರೇಶ್‌ ಎಂದು ಗುರುತಿಸಲಾಗಿದೆ.

ಬೆಳಗಾವಿಯಿಂದ ದ್ರಾಕ್ಷಿ ತುಂಬಿಕೊಂಡು ಬೆಂಗಳೂರಿಗೆ ವಾಹನ ಬರುತ್ತಿತ್ತು. ಈ ವೇಳೆ, ಚಿಕ್ಕನಹಳ್ಳಿ ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ವಾಹನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!