ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು ಅದೇ ರೀತಿ ಎಲ್ಲಾ ರಾಜ್ಯಗಳಿಗೂ ತಲುಪಿದ್ದು ಮುಂದಿನ ಅನಾಹುತವನ್ನು ಗಮನಿಸಿಕೊಂಡ ಜೆಡಿಎಸ್ ಪಕ್ಷವು ಪ್ರಜ್ವಲ್ ರೇವಣ್ಣ ಅವರನ್ನು ಉಚ್ಛಾಟಿಸಿ ಮಾಜಿ ಪ್ರಧಾನಿ ದೇವೇಗೌಡರು ಆದೇಶವನ್ನು ಹೊರಡಿಸಿದ್ದಾರೆ.
ಈ ಕುರಿತು ಇಂದು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಬಿಜೆಪಿಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜ್ವಲ್ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನೆಲು ಜೆಡಿಎಸ್ ಈ ಕ್ರಮ ಕೈಗೊಂಡಿದ್ದು ಲೋಕಸಭಾ ಚುನಾವಣೆ ಹಿನ್ನೆಲೆ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗ್ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆ ಇನ್ನಷ್ಟು ಅನಾಹುತ ನಿಯಂತ್ರಿಸುವ ಆದೇಶವನ್ನು ಮಾಜಿ ಪ್ರಧಾನಿ ದೇವೇಗೌಡರು ತೆಗೆದುಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಪ್ರಜ್ವಲ್ ರೇವಣ್ಣನವರು ಕರ್ನಾಟಕ ಬಿಟ್ಟು ಹೊರದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.