ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಇಂದು ಮೃತಪಟ್ಟಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ಪರಶುರಾಮ ಲಮಾಣಿ(27) ಎಂದು ತಿಳಿದುಬಂದಿದೆ. ಈಶ್ವರಮಂಗಲದಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ ಪರಶುರಾಮ ಊರವರೊಂದಿಗೆ ಹೆಚ್ಚಿನ ಒಡನಾಡಿಯಾಗಿ ಉತ್ತಮವಾಗಿ ಕಾಯಕವನ್ನು ನಿರ್ವಹಿಸಿಕೊಂಡಿದ್ದರು.
ಸೆಪ್ಟೆಂಬರ್ 20ರಂದು ಈಶ್ವರಮಂಗಲದಿಂದ ತನ್ನ ಬೈಕ್’ನಲ್ಲಿ ಪುತ್ತೂರು ಕಡೆ ಬರುತ್ತಿದ್ದ ವೇಳೆ ಸಂಟ್ಯಾರು ಬಳಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಪರಶುರಾಮರನ್ನು, ಹೆಚ್ಚಿನ ಚಿಕೆತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.