';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ : ಬಾರೆಕಾಡ್ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯ ನೀರಿನಲ್ಲಿ ಆಟವಾಡಲು ಇಳಿದ ಬಾಲಕನೋರ್ವ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಬಂಟ್ವಾಳದ ಕಸ್ಟಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ ಮುಹಮ್ಮದ್ ಸೌಹಾದ್ ( 11 ) ಮೃತ ಬಾಲಕ , ಸುತ್ತ ಬೇಲಿ ಹಾಕಲಾಗಿದ್ದ ಈ ಕೆಂಪು ಕಲ್ಲಿನ ಕೋರೆಯಲ್ಲಿ ಮಳೆಯಿಂದಾಗಿ ನೀರು ತುಂಬಿತ್ತೆನ್ನಲಾಗಿದೆ.
ಸೌಹಾದ್ ಇಬ್ಬರು ಸ್ನೇಹಿತರ ಜೊತೆ ಆಟವಾಡಲೆಂದು ಇಳಿದಾಗ ಸೌಹಾದ್ ಆಯತಪ್ಪಿ ನೀರಿಗೆ ಬಿದ್ದಿದ್ದು ತಕ್ಷಣ ಇಬ್ಬರು ಸ್ನೇಹಿತರು ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು ಧಾವಿಸಿ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.