ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಿತ 15 ಮಂದಿ ಆರೋಪಿಗಳನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು 17 ಮಂದಿಯನ್ನು ಕೂಡ ಪೊಲೀಸ್ ಕಸ್ಟಡಿಗೆ ನೀಡಿದ ಬಗ್ಗೆ ವರದಿಯಾಗಿದೆ.

ಪವಿತ್ರ ಗೌಡರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದಾರೆ ಎನ್ನುವ ಆರೋಪದಡಿಯಲ್ಲಿ ರೇಣುಕಾ ಸ್ವಾಮಿ ಎಂಬ ಯುವಕರನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆಗೈದು ಚರಂಡಿಗೆ ಬಿಸಾಡಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ ಎಂದು ವರದಿಯಾಗಿದೆ.

ಇದೀಗ ಪೊಲೀಸ್ ವಶದಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ವಾದ ವಿವಾದಗಳನ್ನು ಕೇಳಿದ ನಂತರ ಹೆಚ್ಚಿನ ತನಿಖೆಗಾಗಿ 17 ಮಂದಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ A1 ಆರೋಪಿಯಾಗಿ ಪವಿತ್ರ ಗೌಡ ಹಾಗೂ A2 ಆರೋಪಿಯಾಗಿ ದರ್ಶನ್ ಹಾಗೂ A3 ಆರೋಪಿಯಾಗಿ ನಟ ದರ್ಶನ ಹಾಗೂ ಪವಿತ್ರ ಗೌಡರ ಆಪ್ತ ಎನಿಸಿಕೊಂಡಂತಹ ಪವನ್ ರವರು ಎಂದು ತಿಳಿದುಬಂದಿದ್ದು ಉಳಿದವರು ಈ ಪ್ರಕರಣದಲ್ಲಿ ಭಾಗಿಯಾದವರೆಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ತನಿಖೆಯ ನಂತರವಷ್ಟೇ ಹೊರ ಬರಬೇಕಾಗಿದೆ.