ಕರ್ನಾಟಕ: ಕಬಾಬ್ ಪ್ರಿಯರಿಗೆ ಬಿಗ್ ಶಾಕ್ ಒಂದು ರಾಜ್ಯ ಸರ್ಕಾರ ನೀಡಿದ್ದು ರಾಜ್ಯಾದ್ಯಂತ ಚಿಕನ್ ಕಬಾಬ್ ಮತ್ತು ಮೀನಿನ ಖಾದ್ಯಗಳಿಗೆ ಕೃತಕ ಬಣ್ಣದ ಬಳಕೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಈ ಸಂಬಂಧ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗಳು ಕಳಿಸಿದ್ದು ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ ಎಂಟು ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣೆ ವರದಿಗಳಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.
ವೆಜ್,ಚಿಕನ್,ಫಿಶ್ ಇತರೆ ಕಬಾಬ್ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಸರಕಾರ ಈ ಆದೇಶವನ್ನು ಹೊರಡಿಸಿದೆ ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರಲ್ಲಿ ನಿಯಮ 59 ರಾಡಿ ಏಳು ವರ್ಷಗಳಿಂದ ಜೀವಾವಧಿವರೆಗೆ ಮತ್ತು 10 ಲಕ್ಷಗಳವರೆಗೆ ದಂಡವನ್ನು ವಿಧಿಸಬಹುದಾಗಿದೆ ಎಂದು ಸರಕಾರವು ಪ್ರಕಟಣೆಯಲ್ಲಿ ತಿಳಿಸಿದೆ.