dtvkannada

'; } else { echo "Sorry! You are Blocked from seeing the Ads"; } ?>

ನೆಲ್ಯಾಡಿ, ಸೆ 6: ಪುತ್ತೂರಿನ ಕುಂಬ್ರದಿಂದ ತಂಡವಾಗಿ ಬೈಕ್ ರೈಡಿಂಗ್’ಗೆ ತೆರಳಿದ್ದ ತಂಡ ಸರಣಿ ಅಪಘಾತಕ್ಕೆ ತುತ್ತಾಗಿ ಒಬ್ಬ ಮೃತಪಟ್ಟ ಘಟನೆ ಘಟನೆ ನೆಲ್ಯಾಡಿ ಸಮೀಪದ ಎಂಜಿರ ಬಳಿ ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಮನೋಜ್(20) ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನೊರ್ವ ಯುವಕ ಚೇತನ್(20) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೈಕ್ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹಸವಾರ ಗಂಭೀರ ಗಾಯಗೊಂಡಿದ್ದಾನೆ.
ಸ್ನೇಹಿತನ ಬೈಕ್ ಅಪಘಾತದ ವಿಷಯ ತಿಳಿದು ಅದೇ ತಂಡದ ಇನ್ನೊಂದು ಬೈಕ್’ನಲ್ಲಿದ್ದ ಯುವಕರು ಗಡಿಬಿಡಿಯಲ್ಲಿ ಹಿಂತಿರುಗಿ ಬರುತ್ತಿದ್ದ ವೇಳೆ ಸ್ಕಿಡ್ ಆಗಿ ಬಿದ್ದಿದ್ದು, ಅದರಲ್ಲಿದ್ದ ಸವಾರರಿಬ್ಬರು ಗಾಯಗೊಂಡಿದ್ದಾರೆ. ಸಚಿನ್(20) ಎಂಬ ಯುವಕನ ಕಾಲು ಮುರಿತಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>

ಇಂದು ಬೆಳಗ್ಗೆ 11.30 ರ ಸುಮಾರಿಗೆ ಪುತ್ತೂರಿನ ಕುಂಬ್ರದಿಂದ 8 ಬೈಕುಗಳಲ್ಲಿ ತಂಡವೊಂದು ಬೈಕ್ ರೈಡಿಂಗ್ ಹೊರಟಿತ್ತು. ಅವುಗಳ ಪೈಕಿ ಕೆಟಿಎಂ ಬೈಕೊಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡಬ ತಾಲ್ಲೂಕಿನ ಎಂಜಿರ ಸಮೀಪ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಹೊಸ ವಾಹನಗಳನ್ನು ತುಂಬಿಕೊಂಡು ಬರುತ್ತಿದ್ದ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗದ ಚಾಲನೆಯಿಂದಾಗಿ ಅಪಘಾತವಾಗಿದ್ದು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟ ಯುವಕನ ಮೈಮೇಲೆ ಕಂಟೇನರ್ ಲಾರಿ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!