';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಮಂಗಳೂರು ಸಂಯುಕ್ತ ಖಾಝಿ ಸೆಯ್ಯದ್ ಕೂರತ್ ತಂಙಳ್ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದರು.
ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ.
ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ
ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾರೆ.
ಕೂರತ್ ತಂಙಳರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯು ಟಿ ಖಾದರ್ ಶಾಸಕ ಅಶೋಕ್ ಕುಮಾರ್ ರೈ, ರಾಮನಾಥ ರೈ, ಇನಾಯತ್ ಅಲಿ, ಹೇಮಾನಾಥ ಶೆಟ್ಟಿ ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.