dtvkannada

'; } else { echo "Sorry! You are Blocked from seeing the Ads"; } ?>

ಮಡಿಕೇರಿ: ಕೊಡಗಿನಲ್ಲಿ ಮಕ್ಕಳಿಂದ ತಯಾರಾಗುತ್ತೀರುವ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳ ಮೂಲಕ ಮಕ್ಕಳು & ಸಮುದಾಯದಲ್ಲಿ ಬಣ್ಣ & ಪಿ.ಓ.ಪಿ.ರಹಿತ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಕೊಡಗಿನಲ್ಲಿ ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ದೊರೆತಿದೆ.

ಕೊಡಗಿನಲ್ಲಿ ಶಾಲೆಗಳು ಆರಂಭವಾಗಿದ್ದು, ಶಿಕ್ಷಕರು ಸಾಮಾಜಿಕ ಜಾಲತಾಣ ವಾಟ್ಸಪ್ ಮೂಲಕ ಕಳುಹಿಸುತ್ತಿದ್ದಾರೆ. ಈ ಮಾಹಿತಿ ವೀಡಿಯೋ ನೋಡಿ ಮಕ್ಕಳು ತಮ್ಮ ಮನೆಯಲ್ಲೇ ಪೋಷಕರ ಜೊತೆಗೆ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿಯನ್ನು ಉತ್ತಮವಾಗಿ ತಯಾರಿಸುತ್ತಿದ್ದಾರೆ. ಆಶಾದಾಯಕ ಬೆಳವಣಿಗೆಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಜಾಗೃತಿ ಆಂದೋಲನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈ ವಿಚಾರ ಸಂತಸ ತಂದಿದೆ ಎಂದು ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!