ಮಂಗಳೂರು: ಹಿಂದೂಗಳ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಗುರುಪುರ ಗ್ರಾಮದ ಮೊಹಮ್ಮದ್ ಅಲಿ ಎಂದು ತಿಳಿದು ಬಂದಿದೆ.
ಹಿಂದೂ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ರಿಕ್ಷಾ ಚಾಲಕನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಎಂದು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದ. ನಾನೊಬ್ಬ ಬ್ಯುಸಿನೆಸ್ ಮ್ಯಾನ್ ಎಂದು ಹೇಳಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಮಹಮ್ಮದ್ ಆಲಿ ಹಿಂದೂಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರನ್ನು ಬಲೆಗೆ ಹಾಕುತ್ತಿದ್ದ ಎಂಬ ಬಗ್ಗೆ ಮಾಹಿತಿ ಗೊತ್ತಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ತನಿಖೆಗೆ ಒಳಪಡಿಸಿದ್ದಾರೆ.