ಮಂಗಳೂರು: ಕೇರಳದಲ್ಲಿ ಕೊರೊನಾ ಜೊತೆ ನಿಫಾ ವೈರಸ್ ಪತ್ತೆಯಾಗಿರುವ ಕಾರಣ ಕರ್ನಾಟಕ ಕೇರಳ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಚೆಕ್ಪೋಸ್ಟ್ನಲ್ಲಿ ತಪಾಸಣೆಯನ್ನೂ ಬಿಗಿಗೊಳಿಸಲಾಗಿದ್ದು, ಆರ್ಟಿಪಿಸಿಆರ್ ನೆಗೆಟಿವ್ ವರದಿ ಇದ್ದರಷ್ಟೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಯಾರಾದರೂ ಶಂಕಿತ ಪ್ರಕರಣ ಕಂಡುಬಂದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಕೇರಳದಲ್ಲಿ ಸದ್ಯ ಇಬ್ಬರು ಆರೋಗ್ಯ ಸಿಬ್ಬಂದಿಗೆ ನಿಫಾ ಹರಡಿರುವ ಮಾಹಿತಿ ಸಿಕ್ಕಿದೆ.
ಸೆಪ್ಟೆಂಬರ್ 3 ರಂದು ಕೇರಳದಲ್ಲಿ ನಿಫಾದಿಂದ 12 ವರ್ಷ ಪ್ರಾಯದ ಬಾಲಕ ಮೃತಪಟ್ಟಿದ್ದ. ಸದ್ಯ ಮೃತಪಟ್ಟ ಬಾಲಕನ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ವಹಿಸಲಾಗಿದೆ. ನಿಫಾಗೆ ಬಲಿಯಾದ ಹುಡುಗನ 251 ಸಂಪರ್ಕಗಳಲ್ಲಿ 129 ಆರೋಗ್ಯ ಕಾರ್ಯಕರ್ತರು ಮತ್ತು 54 ಹೆಚ್ಚಿನ ಅಪಾಯದ ವರ್ಗದಲ್ಲಿದ್ದಾರೆ. ಹೆಚ್ಚಿನ ಅಪಾಯದ ವರ್ಗದಲ್ಲಿ 30 ಆರೋಗ್ಯ ಕಾರ್ಯಕರ್ತರು ಇದ್ದಾರೆ ಎಂದು ತಿಳಿದು ಬಂದಿದೆ