ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 20.07.2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ-ಕಾಲೇಜುಗಳಲ್ಲಿ ರಜೆಯನ್ನು ಕೂಡ ಘೋಷಣೆ ಮಾಡಲಾಗಿದೆ.
ವಿಪರೀತ ಮಳೆ ಹಿನ್ನಲೆ ಪುತ್ತೂರು ಸಹಿತ ಎಲ್ಲಾ ತಾಲೂಕಿನ ಎಲ್ಲಾ ಅಂಗನವಾಡಿ ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಗಳಿಗೆ ರಜೆಯನ್ನು ಘೋಷಣೆ ಮಾಡಿ ಆದೇಶವನ್ನು ಜಿಲ್ಲಾಧಿಕಾರಿಗಳಾದ ಮುಲ್ಲ್ಯೆ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಸತತ ಐದು ದಿನದ ರಜೆಗಳ ಬಳಿಕ ಎಲ್ಲಾ ಮಕ್ಕಳಿಗೆ ಸೋಮವಾರದಿಂದ ಎಂದಿನಂತೆ ಶಾಲಾ ಕಾಲೇಜು ನಡೆಯಲಿದೆ.ಸತತ ಒಂದು ವಾರ ರಜೆ ಪಡೆದು ಮಕ್ಕಳ ಖುಷಿಯಂತು ಹೇಳಿ ತೀರದು.