dtvkannada

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ಪೊಲೀಸರು ಹಾಜರುಪಡಿಸಿದ್ದರು. ಇದೀಗ, ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಇಂದು ಸೆರೆಹಿಡಿದಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು (ಸೆಪ್ಟೆಂಬರ್ 7) ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

By dtv

Leave a Reply

Your email address will not be published. Required fields are marked *

error: Content is protected !!