ಟೀಮ್ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವಿಚ್ಛೇದನ ಪಡೆದಿದ್ದಾರೆ ಎಂದು ವರದಿಯಾಗಿದೆ. ವರ್ಷಗಳ ಹಿಂದೆ ಗಬ್ಬರ್ ಸಿಂಗ್ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಅಷ್ಟೇ ಅಲ್ಲದೆ ಆ ಬಳಿಕ ಪತ್ನಿ ಜೊತೆ ಧವನ್ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಇಬ್ಬರು ಡೈವೋರ್ಸ್ ಪಡೆದಿದ್ದಾರೆ ಎನ್ನಲಾಗಿದೆ. ಇದನ್ನು ಪುಷ್ಠೀಕರಿಸುವಂತೆ ಆಯೇಷಾ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಶಿಖರ್ ಧವನ್ ಭಾರತೀಯ ಮೂಲದ ಆಸ್ಟ್ರೇಲಿಯಾ ಪ್ರಜೆ ಆಯೇಷಾ ಮುಖರ್ಜಿಯನ್ನು ಪ್ರೀತಿಸಿ ಮದುವೆಯಾಗಿದ್ದರು. 2012 ರಲ್ಲಿ ತನಗಿಂತ 10 ವರ್ಷ ಹಿರಿಯಳೊಂದಿಗೆ ಹೊಸ ಜೀವನ ಆರಂಭಿಸಿದ್ದ ಧವನ್ಗೆ ಜೋರಾವರ್ ಎಂಬ ಮಗನಿದ್ದಾನೆ. ಇನ್ನು ಮೊದಲ ಪತಿಯಿಂದ ಡೈವೊರ್ಸ್ ಪಡೆದಿದ್ದ ಆಯೇಷಾಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಒಂಬತ್ತು ವರ್ಷಗಳ ದಾಂಪತ್ಯ ಜೀವನವು ಸುಗಮವಾಗಿ ಸಾಗಿತ್ತು. ಆದರೆ ಕಳೆದೊಂದು ವರ್ಷದಿಂದ ಈ ಜೋಡಿ ನಡುವೆ ವೈಮನಸ್ಸು ಮೂಡಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಆಯೇಷಾ ತನ್ನ ಇನ್ಸ್ಟಾಗ್ರಾಮ್ ಖಾತೆಯಿಂದ ಶಿಖರ್ ಫೋಟೋಗಳನ್ನು ಡಿಲೀಟ್ ಮಾಡಿದ್ದರು.
ಇದಾಗ್ಯೂ ತಮ್ಮ ಡೈವೊರ್ಸ್ ಬಗ್ಗೆ ಶಿಖರ್ ಧವನ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹಾಗೆಯೇ ಆಯೇಷಾ ಅವರ ಹೇಳಿಕೆಯನ್ನೂ ಸಹ ನಿರಾಕರಿಸಿಲ್ಲ. ಹೀಗಾಗಿ ಕಳೆದೊಂದು ವರ್ಷದಿಂದ ದೂರವಾಗಿದ್ದ ಧವನ್ ಜೋಡಿ ಇದೀಗ ಡೈವೋರ್ಸ್ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>