ಪುತ್ತೂರು: ಕಾಲೇಜು ಬಿಟ್ಟು ಮನೆ ಕಡೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಗ್ಯಾಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕೌಡಿಚ್ಚಾರ್ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಇದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತಾ (16) ಎಂದು ಗುರುತಿಸಲಾಗಿದೆ.
ಬಸ್ಸಿನಿಂದಿಳಿದು ರಸ್ತೆ ಬದಿಯಲ್ಲಿ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಲಾರಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿನಿ ರಸ್ತೆ ಬದಿಯ ತೋಟಕ್ಕೆ ಹಾರಿ ಬಿದ್ದಿದ್ದು ಅಪಘಾತದ ತೀವೃತೆಗೆ ತಲೆಗೆ ಗಂಭೀರ ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾಣಿಸಲಾಗಿದೆ.