ಮಂಗಳೂರು: ನಟಿ, ಸ್ಟಾರ್ ಆಂಕರ್ ಅನುಶ್ರೀ ವಿರುದ್ಧ ಡ್ರಗ್ಸ್ ಕೇಸ್ ಆರೋಪ ಬಂದಿದ್ದು ಇದಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಚಾರ್ಜ್ಶೀಟ್ನಲ್ಲಿರುವ ಬಗ್ಗೆ ಮಾಹಿತಿ ಹೊರಬಿದ್ದಿದ್ದು ಅನುಶ್ರೀ ಬಂಧನವಾಗುವ ಸಾಧ್ಯತೆಯಿದೆ. ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎ2 ಆರೋಪಿಯಾಗಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್ಗೆ ಅನುಶ್ರೀ ಡ್ರಗ್ಸ್ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ದಾಖಲಿಸಲಾಗಿದೆ.ಡ
ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ಶೀಟ್ನಲ್ಲಿ ಆ2 ಕಿಶೋರ್ ಶೆಟ್ಟಿಯನ್ನು ಉಲ್ಲೇಖಿಸಲಾಗಿದೆ. ‘ರಿಯಾಲಿಟಿ ಶೋನ ಕೊರಿಯೋಗ್ರಾಫರ್ ಆಗಿದ್ದ ತರುಣ್ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್ ರೂಮ್ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್ ಖರೀದಿಸಿ ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ.’ ಎಂದು ಚಾರ್ಜ್ಶೀಟ್ನಲ್ಲಿ ಆ2 ಕಿಶೋರ್ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.
2007-08ರ ಸಮಯದಲ್ಲಿ ರಿಯಾಲಿಟಿ ಶೋ ನಡೆಯುತ್ತಿತ್ತು. ಆಗ ಅನುಶ್ರೀ, ತರುಣ್ ಹಾಗೂ ಕಿಶೋರ್ ಒಡನಾಟವಿತ್ತು ಎನ್ನಲಾಗಿದೆ. ಈ ಕುರಿತಂತೆ ಕಿಶೋರ್ ಶೆಟ್ಟಿ ಹೇಳಿಕೆ ನೀಡಿರುವಂತೆ, ನಟಿ ಅನುಶ್ರೀ, ತರುಣ್ ಹಾಗೂ ಕಿಶೋರ್ ಒಟ್ಟಿಗೆ ಡ್ರಗ್ಸ್ ಸೇವಿಸುತ್ತಿದ್ದರು. ಊಟಕ್ಕೂ ಮುನ್ನ ಡ್ರಗ್ಸ್ ಸೇವಿಸುತ್ತಿದ್ದರು ಎಂದು ಕಿಶೋರ್ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.