ಐಸಿಸಿ ಟಿ 20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.
ಐಸಿಸಿ ಪುರುಷರ ಟಿ20 ವಿಶ್ವಕಪ್ ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಓಮನ್ ಮತ್ತು ಯುಎಇಯಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ, ಭಾರತವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಅಕ್ಟೋಬರ್ 24 ರಂದು ಆಡಲಿದೆ.
Team India – ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ.
ಸ್ಟ್ಯಾಂಡ್ ಬೈ ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.
ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ವೇಳಾಪಟ್ಟಿ:
ಭಾರತ vs ಪಾಕಿಸ್ತಾನ – 24 ಅಕ್ಟೋಬರ್
ಭಾರತ vs ನ್ಯೂಜಿಲ್ಯಾಂಡ್ – 31 ಅಕ್ಟೋಬರ್
ಭಾರತ vsಅಫ್ಘಾನಿಸ್ತಾನ – 3 ನವೆಂಬರ್
ಭಾರತ vs ಕ್ವಾಲಿಫೈಯರ್ ಬಿ 1 – 5 ನವೆಂಬರ್
ಭಾರತ vs ಕ್ವಾಲಿಫೈಯರ್ ಎ 2 8 ನವೆಂಬರ್