dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಮಾಜಿ ಸಿ ಎಂ ಎಸ್ ಎಂ ಕೃಷ್ಣ ನಿಧನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹಿರಿಯ ಮುತ್ಸದ್ದಿ ಅಜಾತಶತ್ರುವನ್ನು ರಾಜ್ಯ ಕಳೆದುಕೊಂಡಿದೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.

'; } else { echo "Sorry! You are Blocked from seeing the Ads"; } ?>

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ. ಎಂದು ಸಿದ್ದರಾಮಯ್ಯ ತನ್ನ ಆತ್ಮೀಯ ಒಡನಾಟಿಯ ಆಗಲುವಿಕೆಗೆ ಕಂಬನಿ ಮಿಡಿದಿದ್ದಾರೆ.

ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಯಿಸಿ
ಆತ್ಮೀಯರು, ನನ್ನ ರಾಜಕೀಯ ಮಾರ್ಗದರ್ಶಿಗಳಾಗಿದ್ದ ಕೃಷ್ಣ ಅವರ ಜೊತೆ ಕಳೆದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು. ಅವರ ದೂರದೃಷ್ಟಿಯ ‌ನಾಯಕತ್ವ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಹೇಳಿದರು ಇದೇ ವೇಳೆ
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!