';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ತುಮಕೂರು: ಕ್ಷುಲ್ಲಕ್ಷ ಕಾರಣಕ್ಕೆ ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರುವಿನ ವಿಜಯ ನಗರ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ಬಾಲಕನನ್ನು ಬಿಜೆಪಿ ಕಾರ್ಯಕರ್ತೆಯಾಗಿರುವ ಶಕುಂತಲಾ ನಟರಾಜ್ ಪುತ್ರ ತ್ರಿಷಾಲ್ (13) ಎಂದು ಗುರುತಿಸಲಾಗಿದೆ. ತನ್ನ ತಾಯಿ ಜೊತೆ ವಿಜಯ ನಗರದ ಎರಡನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ತ್ರಿಷಾಲ್ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬೆಳಿಗ್ಗೆ ಮನೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.
ಶಾಲೆಯಲ್ಲಿ ಸಹಪಾಠಿಗಳೊಂದಿಗೆ ನಡೆಸಿದ ಬೆಟ್ಟಿಂಗ್ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದೆ.
ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಡೆತ್ ನೋಟ್ ಇದೇ ವೇಳೆ ಸಿಕ್ಕಿದ್ದು ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ. ಶಕುಂತಲಾ ನಟರಾಜ್ ರವರ ಅತೀ ಹೆಚ್ಚು ಕೋಮು ವೈಷಮ್ಯ ಮಾತುಗಳಿಂದ ಸಮಾಜದಲ್ಲಿ ವಿವಾದಿತಾರಾಗಿದ್ದರು.