ಮಂಗಳೂರು: ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಮಂಗಳೂರಿನಲ್ಲಿರುವ ಎಸ್ಡಿಪಿಐ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಆಚರಿಸಲಾಯಿತು.

ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಅಬ್ದುಲ್ ಜಲೀಲ್ ಕೃಷ್ಣಾಪುರ ಅವರು ಧ್ವಜಾರೋಹಣಗೈದ ಬಳಿಕ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಡಾ ಬಿ ಅರ್ ಅಂಬೇಡ್ಕರ್ ಅವರ ತ್ಯಾಗ, ಪರಿಶ್ರಮ ಅಪಾರವಾಗಿದೆ. ಭಾರತದ ಸಂವಿಧಾನದ ಹಿರಿಮೆಯನ್ನು ನಾವು ಕಾಪಾಡಿಕೊಂಡು ಹೋಗುವುದು ನಮ್ಮ ಮೇಲಿರುವ ಜವಾಬ್ದಾರಿಯೆಂದು ತಿಳಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ಉಪಾದ್ಯಕ್ಷರಾದ ಆಯಿಷಾ ಬಜ್ಪೆಯವರು ನೆರೆದವರಿಗೆ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು.
ಸಭೆಯಲ್ಲಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಕಾರ್ಯದರ್ಶಿ ಸುಹೈಲ್ ಖಾನ್, ಮಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ವಿಧಾನ ಸಭಾ ಅದ್ಯಕ್ಷರಾದ ಇರ್ಷಾದ್ ಹಳೆಯಂಗಡಿ, ಸಿದ್ದಿಕ್ ಬೆಂಗರೆ, ಉಸ್ಮಾನ್ ಗುರುಪುರ ಉಪಸ್ಥಿತರಿದ್ದರು.
ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ಸದಸ್ಯರಾದ ಅಕ್ಬರ್ ರಾಝ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿ,ಕಾರ್ಯಕ್ರಮ ನಿರೂಪಿಸಿದರಲ್ಲದೆ ನೆರೆದವರಿಗೆ ಧನ್ಯವಾದ ಸಲ್ಲಿಸಿದರು.