';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ.
ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲ್ಲೂಕ್ ಮಲ್ಲೇಶಪುರ ನಿವಾಸಿಗಳು.
ಈ ಮೂವರು ಗಣಪತಿ ಪ್ರತಿಷ್ಠಾನ ಕ್ಕೆ ಅನುಮತಿ ಪಡೆಯಲು ಚನ್ನಗಿರಿಗೆ ಒಂದೇ ಬೈಕ್ ನಲ್ಲಿ ಚಲಿಸುತ್ತಿದ್ದರು. ಈ ವೇಳೆ ಬೈಕಿಗೆ ಬೊಲೆರೋ ಡಿಕ್ಕಿಯಾಗಿದೆ. ಘಟನೆಯಿಂದ ತೀವ್ರ ಗಾಯಗೊಂಡಿದ್ದ ಯುವಕರನ್ನ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ರಸ್ತೆ ಮಧ್ಯೆ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.