ಲಂಡನ್: ಮ್ಯಾಂಚೆಸ್ಟರ್’ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯವನ್ನು ಇಸಿಬಿ ಮತ್ತು ಬಿಸಿಸಿಐ ರದ್ದುಮಾಡಿದೆ. ಕೊರೋನ ಮುನ್ನೆಚ್ಚರಿಕಾ ಕ್ರಮವಾಗಿ, ಆಟಗಾರರ ಸುರಕ್ಷತೆಯ ಮೇರೆಗೆ ರದ್ದುಮಾಡಲಾಗಿದೆ ಎಂದು ಇಸಿಬಿ ಮತ್ತು ಬಿಸಿಸಿಐ ಹೇಳಿದೆ
ಟೀಂ ಇಂಡಿಯಾ ತಂಡದ ಸಹಾಯಕ ಸಿಬ್ಬಂದಿಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದ ಕಾರಣ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆಯಲ್ಲಿದೆ.
The ECB and BCCI have mutually decided to call off the fifth #ENGvIND Test, which was due to begin today.
— ICC (@ICC) September 10, 2021
Details 👇https://t.co/MIAkhQodzK
ಓವಲ್‌ನಲ್ಲಿ ನಡೆದ ಕೊನೆಯ ಟೆಸ್ಟ್‌ನಲ್ಲಿ ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದರ ನಂತರ ಬೌಲಿಂಗ್ ತರಬೇತುದಾರ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ವರದಿಯೂ ಕೊರೋನಾ ಪಾಸಿಟಿವ್ ಆಗಿತ್ತು. ಅಷ್ಟೇ ಅಲ್ಲದೆ ಮ್ಯಾಂಚೆಸ್ಟರ್ ಟೆಸ್ಟ್‌ಗೆ ಮುನ್ನ, ತಂಡದ ಫಿಸಿಯೊ ಯೋಗೇಶ್ ಪರ್ಮಾರ್ ಅವರ ಕೊರೋನಾ ಸೋಂಕಿಗೆ ಒಳಗಾಗಿದ್ದರು.