ಮಂಚಿ: ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವಕರ ತಂಡ ಎಸ್ ಡಿ ಪಿ ಐ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಕಡಂಬು ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಯಾದರು.
ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾದ ನವಾಜ್ ಕೊಡಿಬೈಲ್ ವಹಿಸಿದರು. ಕಾರ್ಯಕ್ರಮವನ್ನು SDPI ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಫೈಝಲ್ ಮಂಚಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಚಿ ಗ್ರಾಮದ ಹಲವಾರು ಯುವಕರು ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ದ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಂಚಿ ಗ್ರಾಮದ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ಉಪಸ್ಥಿತರಿದ್ದರು