dtvkannada

ಪುತ್ತೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಈಗಲೇ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮೂಡಿಸುವುದು ನಮ್ಮ ಕರ್ತವ್ಯವೂ ಹೌದು. ಆ ನಿಟ್ಟಿನಲ್ಲಿ ಸುದಾನ ವಸತಿಯುತ ಶಾಲೆಯ ಸ್ಕೌಟ್ಸ್ ಮತ್ತು ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಲ್ಲೇ ಪರಿಸರ ಸ್ನೇಹಿ ಗಣಪನನ್ನು ತಯಾರಿಸಿ ಪೂಜಿಸಿದರು.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮನೆಗಳಲ್ಲಿ ಮಣ್ಣಿನ ಅಥವಾ ರೋಗನಿರೋಧಕ ಶಕ್ತಿಯುಳ್ಳ ಅರಿಶಿಣ ಮಿಶ್ರಿತವಾದ ಗೋಧಿ ಹಿಟ್ಟು ಅಥವಾ ರಾಗಿಹಿಟ್ಟಿನಿಂದ ಮಾಡಿದ ಪುಟ್ಟಗಣೇಶ ವಿಗ್ರಹಗಳನ್ನು ಪೂಜೆ ಮಾಡಿದಲ್ಲಿ ನಮ್ಮ ಹಾಗೂ ಕುಟುಂಬದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂಬ ಹೊಸತನವನ್ನು ನಾವು ತಂದುಕೊಳ್ಳಬೇಕಾಗಿದೆ. ಪ್ಲಾಸ್ಟಿಕ್‌ರಹಿತ ವಸ್ತುಗಳಾದ ಹೂವು ಎಲೆಗಳಿಂದ ಸಿಂಗರಿಸಿ ಆನಂದ ಪಡಬಹುದು. ಅರಿಶಿಣ ಗಣೇಶನನ್ನು ಕೂರಿಸಲು ಪೀಠವಾಗಿ ತೆಂಗಿನ ಕರಟವನ್ನು ಉಪಯೋಗಿಸಬಹುದು. ರೋಗನಿರೋಧಕ ಪರಿಕರ ಬಳಸಿ ಮನೆಯಲ್ಲಿ ಗಣೇಶನ ವಿಗ್ರಹ ಮಾಡಿ ಮನೆಯಲ್ಲೇ ವಿಸರ್ಜಸಿದರೆ ಹೊರಗಿನ ಸಂಪರ್ಕ ಹೊಂದುವ ಅವಶ್ಯಕತೆ ಬರುವುದಿಲ್ಲ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡಂತಾಗುತ್ತದೆ. ವಿಸರ್ಜಿತ ನೀರಿನಿಂದ ಮನೆಯನ್ನು ಶುಚಿ ಮಾಡಿಕೊಂಡರೆ ಕ್ರಿಮಿನಾಶಕವಾಗಿಯೂ ಬಳಕೆಗೆ ಬರುತ್ತದೆ.

ಈ ಬಾರಿ ಗೌರಿ ಗಣೇಶ ಹಬ್ಬವನ್ನು ಕೋವಿಡ್‌ ನಿರೋಧಕ ಅರಿಶಿಣ ಬಳಸಿದ ಪುಟ್ಟಪ್ರತಿಮೆಗಳನ್ನು ಇರಿಸಿ ಆಚರಿಸುವ ಮೂಲಕ ಪ್ರಕೃತಿಗೆ ಕೊಡುಗೆ ನೀಡಬೇಕಾದ ಅನಿವಾರ್ಯತೆಯಿದೆ.
ನೂರು ವರ್ಷದ ಹಿಂದೆ ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಸಹಕಾರಿಯಾದ ಗಣೇಶನ ಹಬ್ಬ ಆಚರಣೆಯು ಇಂದು ಪರಿಸರ ಸ್ನೇಹಿ ಅರಿಶಿಣ ಗಣೇಶ ಹಬ್ಬದ ಆಚರಣೆ ಮೂಲಕ ನಮ್ಮ ಪರಿಸರದ ಉಳಿವಿಗೆ ಸಹಕಾರಿಯಾಗುವುದರಲ್ಲಿ ಸಂಶಯವಿಲ್ಲ.

By dtv

Leave a Reply

Your email address will not be published. Required fields are marked *

error: Content is protected !!