ಬೆಂಗಳೂರು: ಬಹುಮಹಡಿ ಕಟ್ಟದಿಂದ ಬಿದ್ದು ಒಡಿಸ್ಸಾ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತನನ್ನು ಜಾನ್ಸನ್ (23) ಎಂದು ಗುರುತಿಸಲಾಗಿದೆ. ಈ ಘಟನೆ ಕಾಮಾಕ್ಷಿ ಪಾಳ್ಯದ ಬೆಗ್ಗರ್ಸ್ ಕಾಲೋನಿಯಲ್ಲಿ ನಡೆದಿದೆ. ಜಾನ್ಸನ್ ಒಡಿಸ್ಸಾ ಮೂಲದವನಾಗಿದ್ದು, ಕಳೆದ ಎರಡು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ.
ಘಟನೆ ಸಂಬಂಧ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ ಕಂನ್ಸ್ಟ್ರಕ್ಷನ್ ಕಂಪನಿ ವಿರುದ್ಧ ದೂರು ದಾಖಲಾಗಿದೆ. ಪ್ರಕಾಶ್ ರೆಡ್ಡಿ, ಗುತ್ತಿಗೆದಾರ, ಗಿರಿ, ಅಲಿ ರಜಾಕ್ ವಿರುದ್ಧ ಪ್ರಕರಣ ದಾಖಲಾಗಿದೆ.