ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ.
ಆರೋಪಿ ಈಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ಹಾಕಿ ಚಿತ್ರಹಿಂಸೆ ನೀಡಿದ್ದ. ಒಂದು ಸರ್ಜರಿ ಆಗಿದ್ದರೂ ಮಹಿಳೆ ಚೇರಿಸಿಕೊಂಡಿರಲಿಲ್ಲ. ಎಚ್ಚರವೂ ಆಗಿರಲಿಲ್ಲ. ಇದೀಗ ಆಕೆ ಮೃತಪಟ್ಟಿದ್ದಾಗಿ ವರದಿಯಾಗಿದೆ. ಇದು ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ನೆನಪಿಸುವಂತಿದೆ. ಅಂದು ಚಲಿಸುತ್ತಿದ್ದ ಬಸ್ ಮೇಲೆ ನಿರ್ಭಯಾಳನ್ನು ರೇಪ್ ಮಾಡಲಾಗಿತ್ತು.
ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿಯಲ್ಲಿ ಈ ದುರ್ಘಟನೆ ನಡೆದಿತ್ತು. ಶುಕ್ರವಾರ ಮುಂಜಾನೆ ಹೊತ್ತಿಗೆ ಪೊಲೀಸರಿಗೆ ಯಾರೋ ಕರೆ ಮಾಡಿ, ಇಲ್ಲೊಬ್ಬ ವ್ಯಕ್ತಿ ಮಹಿಳೆಯೊಬ್ಬರನ್ನು ಥಳಿಸುತ್ತಿದ್ದಾನೆ ಎಂದು ಹೇಳಿದ್ದರು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಮಹಿಳೆಗೆ ತೀವ್ರ ರಕ್ತಸ್ರಾವ ಆಗಿತ್ತು ಎಂದು ವೈದ್ಯರು ಹೇಳಿದ್ದಾರೆ.
ಘಟನೆ ವಿರುದ್ಧ ರಾಷ್ಟ್ರಾದ್ಯಂತ ವಿರೋಧ ವ್ಯಕ್ತವಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಮಾಡಲಾಗುತ್ತಿದೆ.