';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮೈಸೂರು: ಸೆಪ್ಟೆಂಬರ್ 27ಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ ನೀಡುತ್ತಿದೆ. ಕೇಂದ್ರದ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸೆ.27ಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್, ದೇಶದಲ್ಲಿ ಆಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.
ಜನಸಾಮಾನ್ಯರ ಜೀವನದ ಮೇಲೆ ಹೊಡೆತ ಬಿದ್ದಿದೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ರೈತರ ಹೆಸರಿನಲ್ಲಿ ಮೋಸ ಮಾಡಿರೋದು ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರ ಮಾತ್ರ ಎಂದು ಕಿಡಿಕಾರಿರುವ ಕೋಡಿಹಳ್ಳಿ ಚಂದ್ರಶೇಖರ್, ಬೊಮ್ಮಾಯಿಯವರು ಬಿಎಸ್ ಯಡಿಯೂರಪ್ಪ ಅವರಂತೆ ಧೋರಣೆ ಮುಂದುವರೆಸಿದರೆ ನಮ್ಮ ಹೋರಾಟ ಎದುರಿಸಬೇಕಾಗುತ್ತದೆ. ಸೆಪ್ಟೆಂಬರ್ 27 ಭಾರತ್ ಬಂದ್ ಇದೆ. ಆ ದಿನ ನಾವು ಕರ್ನಾಟಕ ಬಂದ್ ಮಾಡುತ್ತೀವಿ ಎಂದು ತಿಳಿಸಿದ್ದಾರೆ.