ಬೆಳ್ತಂಗಡಿ, ಸೆ .12: ಮಹಿಳಾ ಸಿವಿಲ್ ಡಿಫನ್ಸ್ ಅಧಿಕಾರಿ ಸಾಬಿಯಾ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿಯಲ್ಲಿ ಮೊಂಬತ್ತಿ ಪ್ರತಿಭಟನೆ ಮಾಡಲಾಯಿತು. ಸಾಬಿಯ ಸೈಫಿ ಹತ್ಯೆಯ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಪ್ಲೇಕಾರ್ಡ್ ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಝಾಹೀದ್, ಶಹಝಾದ್ ಮತ್ತು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಉಪಸ್ಥಿತರಿದ್ದರು.