';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಚಿಕ್ಕಬಳ್ಳಾಪುರ: ಜೀಪ್, ಲಾರಿ ನಡುವೆ ಡಿಕ್ಕಿ ಆಗಿ 6 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.
ಜೀಪ್ ನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದು ಈ ಪೈಕಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಮೆಂಟ್ ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಅದೇ ಮಾರ್ಗವಾಗಿ ಹೋಗುತ್ತಿದ್ದ ಶಾಸಕರು, ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.