dtvkannada

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಹಾಗು ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೇರ್ನಾಂಡಿಸ್(80) ವಿದಿವಶರಾಗಿದ್ದಾರೆ.

ಇತ್ತೀಚೆಗೆ ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದ ಅವರು ಕಳೆದ ಕೆಲವು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಬಳಿಕ, 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

ಅವರು ಈ ಮೊದಲು ಮನೆಯಲ್ಲಿ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರಿಂದ ತಲೆಗೆ ಏಟಾಗಿತ್ತು. ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ಆಸ್ಕರ್ ನಿರ್ಲಕ್ಷ್ಯ ವಹಿಸಿದ್ದರು. ಆ ಬಳಿಕ, ಮಾಮೂಲಿ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ತಿಳಿದುಬಂದಿತ್ತು. ಹಾಗಾಗಿ, ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು. ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

By dtv

Leave a Reply

Your email address will not be published. Required fields are marked *

error: Content is protected !!