dtvkannada

ನವದೆಹಲಿ: ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿಯವರೇ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.

ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯಲಿದ್ದಾರೆ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ.

ಮಾಧ್ಯಮ ವರದಿ ನಿಜವಲ್ಲ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ಬದಲಾಯಿಸುವ ಬಗ್ಗೆ ಬಿಸಿಸಿಐ ಯಾವುದೇ ಸಭೆ ನಡೆಸಿಲ್ಲ ಹಾಗೂ ಚರ್ಚಿಸಿಯೂ ಇಲ್ಲ ಎಂದು ಧುಮಲ್ ಹೇಳಿಕೆ ಉಲ್ಲೇಖಿಸಿ ಐಎಎನ್‌ಎಸ್ ವರದಿ ಮಾಡಿದೆ.

ಕೊಹ್ಲಿ ಅವರು ಟೆಸ್ಟ್‌ ಕ್ರಿಕೆಟ್ ನಾಯಕತ್ವದಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಉತ್ತಮ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳನ್ನು ತಂಡ ಹೊಂದಿದ್ದರೂ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಐಸಿಸಿ ಪ್ರಮುಖ ಟೂರ್ನಿಗಳಲ್ಲಿ ತಂಡವನ್ನು ಗೆಲ್ಲಿಸುವುದು ಕೊಹ್ಲಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಂಡದ ನಾಯಕತ್ವ ರೋಹಿತ್ ಪಾಲಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

By dtv

Leave a Reply

Your email address will not be published. Required fields are marked *

error: Content is protected !!