ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರಿನ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆಪ್ಟೆಂಬರ್ 13) ನಿಧನರಾಗಿದ್ದಾರೆ.
ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಹಲವು ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ದೂರವಾಣಿ ಕರೆ ಮಾಡಿದ ಸೋನಿಯಾ ಗಾಂಧಿ ಫೆರ್ನಾಂಡಿಸ್ ಪತ್ನಿಗೆ ಧೈರ್ಯ ತುಂಬಿದ್ದಾರೆ.
2 ದಿನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಉಡುಪಿಯ ಕಾಂಗ್ರೆಸ್ ಕಛೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಬೆಂಗಳೂರಿಗೆ ಪ್ರಾರ್ಥಿವ ಶರೀರವನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ತಿಳಿದು ಬಂದಿದೆ
ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
'; } else { echo "Sorry! You are Blocked from seeing the Ads"; } ?>
ನಮ್ಮ ನಾಡಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ನನ್ನ ಆಪ್ತರೂ ಆಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಗುಣಮುಖರಾಗಿ ಮನೆಗೆ ಮರಳುತ್ತಾರೆ ಎನ್ನುವ ಹೊತ್ತಿನಲ್ಲಿ ಈ ಆಘಾತದ ಸುದ್ದಿ ಬಂದಿದೆ. (1/5) pic.twitter.com/Ivjp4BHlxZ
'; } else { echo "Sorry! You are Blocked from seeing the Ads"; } ?>
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) September 13, 2021
ಸರಳ,ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು.
ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿಕೋರುವೆ. pic.twitter.com/p3txQfO6qj