dtvkannada

ಬೆಳ್ತಂಗಡಿ : ಭಜರಂಗದಳದ ಮುಖಂಡ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ , ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ( 37.ವ ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ .13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .

ಕೆಲ ದಿನಗಳ ಹಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು , ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ ಶ್ರೀಧರ ಪೂಜಾರಿ, ತಾಯಿ ವಸಂತಿ , ಹಾಗು ಡಿಸಿಸಿ ಬ್ಯಾಂಕ್ ನಲ್ಲಿ ಉದ್ಯೋಗದಲ್ಲಿರುವ ಪತ್ನಿ ಬಬಿತಾ , ಓರ್ವ ಪುತ್ರಿ , ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ .

By dtv

Leave a Reply

Your email address will not be published. Required fields are marked *

error: Content is protected !!