ಬಂಟ್ವಾಳ: ರಾತ್ರಿ ವೇಳೆ ರಸ್ತೆ ಬದಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಚಲಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ.
ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ.
ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಒಂದರ ಸಮೀಪ ವ್ಯಕ್ತಿಯೋರ್ವರು ನಡೆದುಕೊಂಡು ಬಂದು ರಸ್ತೆಯಲ್ಲಿ ಮಲಗುವ ದೃಶ್ಯ ಹಾಗೂ ಆ ಬಳಿಕ ಕೆಲವೇ ಹೊತ್ತಿನಲ್ಲಿ ದ್ವಿಚಕ್ರವಾಹನ ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಹೋಗಿ ಸ್ಕೂಟರ್ ಸವಾರ ಕೂಡ ರಸ್ತೆಗೆ ಎಳೆಯಲ್ಪಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ನಡೆದ ಕೂಡಲೇ ಇಬ್ಬರನ್ನು ಆಸ್ಪತ್ರೆ ಗೆ ದಾಖಲಿಸಲಾಗಿತ್ತು.
ಆದರೆ ಕೃಷ್ಣ ಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರನಿಗೆ ಗಾಯವಾಗಿದ್ದು ಆತ ಚಿಕಿತ್ಸೆ ಪಡೆಯುತ್ತಿದ್ದಾನೆ.