dtvkannada

ಆನೇಕಲ್: ಬೊಮ್ಮನಹಳ್ಳಿ -ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಬೈಕ್’ನಲ್ಲಿದ್ದ ಯುವಕ-ಯುವತಿಯರ ದೇಹ ಛಿದ್ರಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಫ್ಲೈಓವರ್ನಲ್ಲಿ ಓವರ್ಟೇಕ್ ಮಾಡಲು ಹೋಗಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂ ಆಗಿತ್ತು. ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರ ದೇಹಗಳು ಪ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಛಿದ್ರಗೊಂಡಿವೆ. ಕಾರಿನ ವೇಗಕ್ಕೆ ಬೈಕ್ ಸವಾರರು ಬಲಿಯಾಗಿದ್ದಾರೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!