';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಪೋಲಿಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿಎಪ್‌ಐ ವತಿಯಿಂದ ಪುತ್ತೂರು ವಿಧಾನಸೌದದ ಬಳಿ ಪ್ರತಿಭಟನೆ ನಡೆಯಿತು.
ಮುಖ್ಯಭಾಷಣಕಾರರಾಗಿ ಆಗಮಿಸಿದ ಸಿಎಫ್‌ಐ ಮುಖಂಡ ಅಶ್ಫಾಕ್ ಬಂಟ್ವಾಳ ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ ಸಭೆಯಲ್ಲಿ ಸಿಎಪ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಅನ್ಸಾರ್ ಬೆಳ್ಳಾರೆ, ಕಾರ್ಯದರ್ಶಿ ಮುಸ್ತಫ ಕೊಡಿಪ್ಪಾಡಿ ಸೇರಿದಂತೆ ಹಲವಾರು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಪೋಲಿಸರಿಂದ ತಡೆ
ಪ್ರತಿಭಟನೆಗೂ ಮುನ್ನ ವಿಧ್ಯಾರ್ಥಿಗಳ ಕೋರ್ಟ್ ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದಾಗ ಪೊಲೀಸರು ತಡೆಯೊಡ್ಡಿದರು. ಈ ಸಂದರ್ಭದಲ್ಲಿ ಪೋಲಿಸರು ಹಾಗು ವಿಧ್ಯಾರ್ಥಿಗಳ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು.