dtvkannada

ಮುಂಬೈ: ಇಲ್ಲಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಒಂದು ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಬೆಳಗಿನ ಜಾವ 4:30 ರ ಸುಮಾರಿಗೆ ಬಿಕೆಸಿ ಮುಖ್ಯ ರಸ್ತೆ ಮತ್ತು ಸಾಂತಾ ಕ್ರೂಜ್-ಚೆಂಬೂರ್ ಲಿಂಕ್ ರಸ್ತೆಯನ್ನು ಸಂಪರ್ಕಿಸುವ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಕುಸಿದಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಗಾಯಗೊಂಡಿರುವ ಕಾರ್ಮಿಕರನ್ನು ಚಿಕಿತ್ಸೆಗಾಗಿ ಬಿಎನ್ ದೇಸಾಯಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!