dtvkannada

ಬೆಂಗಳೂರು: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಮುಂದಿನ ಸೀಸನ್ನಲ್ಲಿ ನಾನು ಆರ್ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ, ಆರ್ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್ ಸೀಸನ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಐಪಿಎಲ್ನಲ್ಲೂ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಶೇಷ ವಿಡಿಯೋವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ. ಅದರಂತೆ ಆರ್‌ಸಿಬಿಯ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್. ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ. ನನ್ನನ್ನು ಬೆಂಬಲಿಸಿದ ಆರ್ಸಿಬಿ ಅಭಿಮಾನಿಗಳಿಗೆ ಧನ್ಯವಾದ ಎಂದು ಕೊಹ್ಲಿ ವಿಡಿಯೋ ಮೂಲಕ ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಮುಂದಿನ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

By dtv

Leave a Reply

Your email address will not be published. Required fields are marked *

error: Content is protected !!