';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಶಿವಮೊಗ್ಗ : ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಮನೆಗೆ ತರುವ ವೇಳೆಯ ಅಗ್ನಿ ಅವಘಡ ಸಂಭವಿಸಿ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಒಂದನೇ ತಿರುವಿನಲ್ಲಿ ಸಂಭವಿಸಿದೆ.
ಶಿವಮೊಗ್ಗ ಮೂಲದ ಅರವಿಂದ ಎನ್ನುವವರು ಕಾರ್ಕಳ ದಿಂದ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ತನ್ನ ಗೆಳೆಯರೊಂದಿಗೆ ಮನೆಗೆ ತರುತ್ತಿದ್ದ ವೇಳೆ ಆಗುಂಬೆ ಒಂದನೇ ತಿರುವಿನಲ್ಲಿ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೆಂಕಿ ಇಡೀ ಗಡಿಯನ್ನೇ ಆವರಿಸಿ ಸುಟ್ಟು ಕರಕಲಾಗಿದೆ, ಕಾರಿನಲ್ಲಿದ್ದವರು ಕೂಡಲೇ ಕೆಳಗೆ ಇಳಿದ ಪರಿಣಾಮ ಹೆಚ್ಚಿನ ಅವಘಡ ತಪ್ಪಿದೆ.
ಕಾರು ಹೊತ್ತಿ ಉರಿದ ಹಿನ್ನೆಲೆಯಲ್ಲಿ ಘಾಟಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಂಕಿ ಆರಿಸಿದ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.