ಬೆಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಸಜೀವದಹನ ಆಗಿದ್ದಾರೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು. 210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ತಾಯಿ, ಪುತ್ರಿ ಮೃತದೇಹ ಹೊರತೆಗೆಯಲಾಗಿದ್ದು, ಮೂರನೇ ಮಹಡಿಯ 210ನೇ ಫ್ಲ್ಯಾಟ್‌ನಲ್ಲಿದ್ದರು ಎಂದು ತಿಳಿದು ಬಂದಿದೆ
ಅಗ್ನಿ ಅವಘಡದಲ್ಲಿ ಭೀಮಸೇನ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಾಳು ಭೀಮಸೇನ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಮಸೇನ್ ತಲೆ, ಕೈ-ಕಾಲುಗಳಲ್ಲಿ ಸುಟ್ಟಗಾಯ ಆಗಿದೆ. ಸಜೀವ ದಹನವಾದ ತಾಯಿ ಮಗಳು ನಿನ್ನೆಯಷ್ಟೇ ಅಮೆರಿಕದಿಂದ ಆಗಮಿಸಿದ್ದರು ಎಂದು ಮಾಹಿತಿ ತಿಳಿದುಬಂದಿದೆ.
ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿರುವ ಬಗ್ಗೆ ಅಗ್ನಿಶಾಮಕ ಇಲಾಖೆ ಎಡಿಜಿಪಿ ಅಮರ್ ಕುಮಾರ್ ಹೇಳಿಕೆ ನೀಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಘಟನೆ ಸಂಭವಿಸಿದ ಶಂಕೆ ಇದೆ. ಪ್ರಾಥಮಿಕ ಮಾಹಿತಿ ಪ್ರಕಾರ ಸಿಲಿಂಡರ್ ಸ್ಫೋಟ ಶಂಕೆ ವ್ಯಕ್ತವಾಗಿದೆ. ತನಿಖೆ ನಂತರ ವಾಸ್ತವಾಂಶ ತಿಳಿಯಲಿದೆ. ಅಗ್ನಿಶಾಮಕ ದಳದ 5 ವಾಹನಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>