ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಸೀಸನ್ನ 32ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ರಾಜಸ್ಥಾನ್ ರಾಯಲ್ಸ್ 2 ರನ್ಗಳ ರೋಚಕ ಜಯ ದಾಖಲಿಸಿದೆ. ರಾಜಸ್ಥಾನ್ ನೀಡಿದ 186 ರನ್ಗಳ ಟಾರ್ಗೆಟ್ ಬೆನ್ನತ್ತಿದ ಪಂಜಾಬ್ ಕಿಂಗ್ಸ್ಗೆ ಅಂತಿಮ ಓವರ್ನಲ್ಲಿ 4 ರನ್ಗಳ ಅವಶ್ಯಕತೆಯಿತ್ತು. ಅದ್ಭುತವಾಗಿ ಅಂತಿಮ ಓವರ್ ಎಸೆದ ಕಾರ್ತಿಕ್ ತ್ಯಾಗಿ 2 ವಿಕೆಟ್ ಪಡೆಯುವುದರೊಂದಿಗೆ ರಾಜಸ್ಥಾನ್ ರಾಯಲ್ಸ್ಗೆ 2 ರನ್ಗಳ ರೋಚಕ ಜಯ ತಂದುಕೊಟ್ಟರು. ಇತ್ತ ಗೆಲುವಿನ ಹೊಸ್ತಿಲಲ್ಲಿ ಎಡವಿದ ಪಂಜಾಬ್ ಕಿಂಗ್ಸ್ ಟೂರ್ನಿಯ 7ನೇ ಸೋಲನ್ನು ತನ್ನದಾಗಿಸಿಕೊಂಡಿತು.
ಇದಕ್ಕೂ ಮುನ್ನ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ತಂಡಕ್ಕೆ ಎವಿನ್ ಲೂಯಿಸ್( 36) ಹಾಗೂ ಯಶಸ್ವಿ ಜೈಸ್ವಾಲ್ (49) ಭರ್ಜರಿ ಆರಂಭ ಒದಗಿಸಿದರು. ಆ ಬಳಿಕ ಬಂದ ಮಹಿಪಾಲ್ ಲೊಮರರ್ 17 ಎಸತೆಗಳಲ್ಲಿ ಬಿರುಸಿನ 43 ರನ್ ಬಾರಿಸಿದರು. ಇದಾಗ್ಯೂ ಅಂತಿಮ ಓವರ್ಗಳಲ್ಲಿ ಕಂಬ್ಯಾಕ್ ಮಾಡಿದ ಪಂಜಾಬ್ ಬೌಲರುಗಳು ರಾಜಸ್ಥಾನ್ ಬ್ಯಾಟ್ಸ್ಮನ್ಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಅದರಂತೆ ರಾಜಸ್ತಾನ್ ತಂಡವು ನಿಗದಿತ 20 ಓವರ್ನಲ್ಲಿ 185 ರನ್ಗಳಿಗೆ ಸರ್ವಪತನ ಕಂಡಿತು. ಪಂಜಾಬ್ ಕಿಂಗ್ಸ್ ಪರ ಅರ್ಷದೀಪ್ ಸಿಂಗ್ 4 ಓವರ್ನಲ್ಲಿ 32 ರನ್ ನೀಡಿ 5 ವಿಕೆಟ್ ಪಡೆದರು. ಹಾಗೆಯೇ ಮೊಹಮ್ಮದ್ ಶಮಿ 4 ಓವರ್ನಲ್ಲಿ 21 ರನ್ ನೀಡಿ 3 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರು.
ಈ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್ಗೆ ಕೆಎಲ್ ರಾಹುಲ್ (49) ಹಾಗೂ ಮಾಯಾಂಕ್ ಅಗರ್ವಾಲ್ (67) ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 120 ರನ್ಗಳ ಜೊತೆಯಾಟವಾಡಿದ ಈ ಜೋಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಅದರಂತೆ 19ನೇ ಓವರ್ನಲ್ಲಿ ಪಂಜಾಬ್ ತಂಡವು 2 ವಿಕೆಟ್ ನಷ್ಟಕ್ಕೆ 182 ರನ್ಗಳಿಸಿತ್ತು. ಇದಾಗ್ಯೂ ಅಂತಿಮ ಓವರ್ನಲ್ಲಿ ಕಾರ್ತಿಕ್ ತ್ಯಾಗಿ ಕೇವಲ 2 ರನ್ ನೀಡಿ ರಾಜಸ್ಥಾನ್ ರಾಯಲ್ಸ್ಗೆ 2 ರನ್ಗಳ ರೋಚಕ ಗೆಲುವು ತಂದುಕೊಟ್ಟರು.
View this post on Instagram'; } else { echo "Sorry! You are Blocked from seeing the Ads"; } ?>