dtvkannada

ಮಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್​ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 25ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ. ಕರ್ನಾಟಕದಲ್ಲಿ ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲೂ ಮಳೆಯ ಅಬ್ಬರದಿಂದ ಪ್ರವಾಹದ ಭೀತಿ ಎದುರಾಗಿದೆ. ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್ನಲ್ಲಿ ಇಂದು ಮಳೆ ಸುರಿಯಲಿದೆ.

By dtv

Leave a Reply

Your email address will not be published. Required fields are marked *

error: Content is protected !!