ಅಬುದಾಬಿ, ಸೆ.23: ಅಬುದಾಬಿಯ ಶೇಖ್ ಝಾಯೇದ್ ಸ್ಟೇಡಿಯಂನಲ್ಲಿ ನಡೆದ ಮುಂಬೈ ಮತ್ತು ಕೊಲ್ಕತ್ತ ನಡುವಿನ ಪಂದ್ಯದಲ್ಲಿ ಕೊಲ್ಕತ್ತ ತಂಡ ಏಳು ವಿಕೆಟ್ ಅಂತರದ ಭರ್ಜರಿ ಭರ್ಜರಿ ಜಯಗಳಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಇಯಾನ್ ಮೊರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಮದ್ಯೆ ನಡೆಯಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಮುಂಬೈ ಇಂಡಿಯನ್ಸ್ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 155 ರನ್ ಪೇರಿಸಿತು. ಗುರಿ ಬೆನ್ನಟ್ಟಿದ ಕೊಲ್ಕತ್ತ ನೈಟ್ ರೈಡರ್ಸ್ ತಂಡ ಕೇವಲ 15.1 ಓವರ್’ಗಳಲ್ಲಿ ಗೆದ್ದು ಬೀಗಿತು.
ಅಯ್ಯರ್, ತ್ರಿಪಾಠಿ ಅಬ್ಬರ; ಕೆಕೆಆರ್ ಗೆಲುವಿನ ಕೇಕೆ
ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ವೆಂಕಟೇಶ ಅಯ್ಯರ್ (53) ಹಾಗೂ ರಾಹುಲ್ ತ್ರಿಪಾಠಿ (74*) ಬಿರುಸಿನ ಅರ್ಧಶತಕಗಳ ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಗೆಲುವು ದಾಖಲಿಸಿದೆ.
156 ರನ್ ಗುರಿ ಬೆನ್ನತ್ತಿದ ಮುಂಬೈ ಇನ್ನು 4.5 ಓವರ್‌ಗಳು ಬಾಕಿ ಉಳಿದಿರುವಂತೆಯೇ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಕೇವಲ 25 ಎಸೆತಗಳಲ್ಲೇ ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಯ್ಯರ್, ಅಬ್ಬರಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ರಾಹುಲ್ ತ್ರಿಪಾಟಿ 29 ಎಸೆತಗಳಲ್ಲಿ ಅರ್ಧಶತಕದ ಸಾಧನೆ ಮಾಡಿದರು. ಅಂತಿಮವಾಗಿ 15.1 ಓವರ್‌ಗಳಲ್ಲೇ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಇದಕ್ಕೂ ಮೊದಲು ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಿದ ಡಿಕಾಕ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಹಿಟ್ಮ್ಯಾನ್ ಜೊತೆಗೂಡಿ ಮೊದಲ ವಿಕೆಟ್ಗೆ 78 ರನ್ ಪೇರಿಸಿದರು. ಇದೇ ವೇಳೆ ರೋಹಿತ್ ಶರ್ಮಾ (33) ಸುನೀಲ್ ನರೈನ್ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಇದರ ಬೆನ್ನಲ್ಲೇ ಸೂರ್ಯಕುಮಾರ್ (5) ಕೂಡ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ 44 ಎಸೆತಗಳಲ್ಲಿ 55 ರನ್ ಬಾರಿಸಿದ ಡಿಕಾಕ್ ತಂಡಕ್ಕೆ ಆಸರೆಯಾದರು. ತಂಡದ ಮೊತ್ತ 106 ಆಗಿದ್ದ ವೇಳೆ ನರೈನ್ಗೆ ಕ್ಯಾಚ್ ನೀಡಿ ಡಿಕಾಕ್ ನಿರ್ಗಮಿಸಿದರು. ಇನ್ನು ಅಂತಿಮ ಹಂತದಲ್ಲಿ ಕೀರನ್ ಪೊಲಾರ್ಡ್ 21 ರನ್ ಕಲೆಹಾಕುವ ಮೂಲಕ ತಂಡದ ಮೊತ್ತವನ್ನು ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 155 ಕ್ಕೆ ತಂದು ನಿಲ್ಲಿಸಿದ್ದರು.