dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊದು ಅವಘಡ ಸಂಭವಿಸಿದೆ. ನಿನ್ನೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಸಿಲಿಂಡರ್ ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದೆ ಎಂದು ಹೇಳಲಾಗಿದೆ.

'; } else { echo "Sorry! You are Blocked from seeing the Ads"; } ?>

ಎರಡು ದಿನದ ಹಿಂದೆಯಷ್ಟೇ ಅಗ್ನಿ ಅವಘಡ ಸಂಭವಿಸಿ ತಾಯಿ ಮಗಳು ಸಜೀವ ದಹನವಾಗಿದ್ದರು. ವಾರದ ಹಿಂದೆಯಷ್ಟೇ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಕರುಣಾಜನಕ ಘಟನೆಯು ನಡೆದಿತ್ತು. ತಿಂಗಳ ಹಿಂದೆ ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣಕ್ಕೀಡಾದ ಘಟನೆ ಮಾಸುವ ಮುನ್ನವೇ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರು.

ಇತ್ತೀಚಿಗೆ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಒಂದರ ಹಿಂದೆ ಮತ್ತೊಂದರಂತೆ ನಡೆಯುತ್ತಿರುವುದು ಸಾವಿನ ಸಂಖ್ಯೆಯು ಏರುತ್ತಿದೆ. ಒಟ್ಟಿನಲ್ಲಿ ಜನ ಬೆಚ್ಚಿಬಿದ್ದಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!