';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ MNG ಫೌಂಡೇಶನ್ (ರಿ) ಮಂಗಳೂರು ವತಿಯಿಂದ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು, ಲಿಯೋ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಪುತ್ತೂರಿನ ರೋಟರಿ ಕ್ಯಾಂಪ್ಕೋ ಸಭಾಂಗಣದಲ್ಲಿ ನಡೆಯಲಿದೆ.
ದಿನಾಂಕ 26 ಸಪ್ಟೆಂಬರ್ 2021,ಆದಿತ್ಯವಾರ ದಿ| ಅವಿನಾಶ್ ಆಳ್ವ ಕೊಳವೂರು,ಕುಪ್ಪೆಪದವು ಸ್ಮರಣಾರ್ಥ ನಡೆಯುವ ರಕ್ತದಾನ ಶಿಬಿರದಲ್ಲಿ MNG ಫೌಂಡೇಶನ್ ವತಿಯಿಂದ ಹಲವು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ.
ಸಮಯ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ರ ವರೆಗೆ ನಡೆಯುವ ಶಿಬಿರದಲ್ಲಿ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಜೀವದಾನಿಗಳಾಗಬೇಕಾಗಿ ಸಂಘಟಕರು ತಿಳಿಸಿದ್ದಾರೆ.